ಉಡುಪಿ: ಉಡುಪಿ ಹಳೆ ಡಯಾನ ವೃತ್ತದ ಬಳಿಯ ಖಾಸಗಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಿದ್ದಾಪುರದ ರಾಮಕೃಷ್ಣ ಭಟ್ (40) ಎಂದು ಗುರುತಿಸಲಾಗಿದೆ. ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಸತಿಗೃಹದಲ್ಲಿ ಕೊಠಡಿ ಬಾಡಿಗೆ ಪಡೆದಿದ್ದ ಅವರು, ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಪೋಲಿಸ್ ಠಾಣೆಯ ಎ.ಎಸ್.ಐ ಅರುಣ್ ಹಂಗಾರಕಟ್ಟೆ, ತನಿಖಾ ಸಹಾಯಕಿ ಸುಷ್ಮಾ ಘಟನಾ ಸ್ಥಳದಲ್ಲಿದ್ದು ಮಹಜರು ಪ್ರಕ್ರಿಯೆ ನಡೆಸಿದರು. ಶವ ತೆರವುಗೊಳಿಸಲು ಹಾಗೂ ಮಣಿಪಾಲದ ವೈದ್ಯಕೀಯ ಪರೀಕ್ಷಾ ಘಟಕ್ಕೆ ಶವ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಾದರು