Wednesday, November 18, 2026

ಹಿರೇಬೆಟ್ಟಿನಲ್ಲಿ ಸಹಕಾರ ಭಾರತಿ ವತಿಯಿಂದ ಗೋಪೂಜೆ

Must read

ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಸಹಕಾರ ಭಾರತಿ ಉಡುಪಿ ತಾಲೂಕು ಹಾಗೂ ಜಿಲ್ಲಾ ಘಟಕ ಮತ್ತು ಹಿರೇಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನೆಲ್ಲಿಕಟ್ಟೆಯ ಹಿರೇಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆವರಣದಲ್ಲಿ ಗೋಪೂಜಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಹಕಾರ ಭಾರತಿ ಉಡುಪಿ ಜಿಲ್ಲಾ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ, ಜಿಲ್ಲಾ ಮಹಿಳಾ ಪ್ರಮುಖ್ ಆಶಾ ಹೆಗ್ಡೆ, ತಾಲೂಕು ಮಹಿಳಾ ಪ್ರಮುಖ್ ರೂಪಾ ಎಸ್. ನಾಯಕ್, ಸಹ ಪ್ರಮುಖ್ ಜ್ಯೋತಿ ಡಿ. ಕಾಮತ್, ಹಿರೇಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಕುಸುಮ ಎನ್. ಪೂಜಾರಿ, ಕಾರ್ಯದರ್ಶಿ ಜ್ಯೋತಿ, ಮಾಜಿ ಅಧ್ಯಕ್ಷೆ ವರದಾಂಭ ಭಟ್, ಆರ್‌ಎಸ್‌ಬಿ ಮಹಿಳಾ ವೇದಿಕೆಯ ಅಧ್ಯಕ್ಷೆ ಭಾರತಿ ಆರ್. ನಾಯಕ್, ಕಾರ್ಯದರ್ಶಿ ಪ್ರೀತಿ ಪಿ. ಕಾಮತ್, ಪ್ರಗತಿಪರ ಕೃಷಿಕರಾದ ಉದಯ ನಾಯಕ್, ಗುರುನಂದ ನಾಯಕ್ ಉಪಸ್ಥಿತರಿದ್ದರು.
ಸಂಘದ ನಿರ್ದೇಶಕರು, ಸದಸ್ಯರು ಹಾಗೂ ಮತ್ತಿತರರು ಭಾಗವಹಿಸಿದ್ದರು.
ಸಹಕಾರ ಭಾರತಿ ಉಡುಪಿ ತಾಲೂಕು ಅಧ್ಯಕ್ಷ ಪಾಂಡುರಂಗ ಕಾಮತ್ ಎಳ್ಳಾರೆ ಕಾರ್ಯಕ್ರಮದ ಸಂಯೋಜನೆ ಮಾಡಿ ಅಧ್ಯಕ್ಷತೆ ವಹಿಸಿದ್ದರು. ಅವರು ಸ್ವಾಗತಿಸಿದರು. ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ್ ಮಣಿಪಾಲ ನಿರೂಪಿಸಿದರು. ಸಹಕಾರ ಭಾರತಿ ಉಡುಪಿ ತಾಲೂಕು ಉಪಾಧ್ಯಕ್ಷ ರತ್ನಾಕರ ಶೆಟ್ಟಿ ವಂದಿಸಿದರು.

spot_img

More articles

LEAVE A REPLY

Please enter your comment!
Please enter your name here