Thursday, November 19, 2026

ಸಾಲಿಗ್ರಾಮ: ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ಹೃದಯಾಘಾತದಿಂದ ನಿಧನ

Must read

ಉಡುಪಿ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾದರು.
ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಬಂಧುಮಿತ್ರರು ಹಾಗೂ ಪರಿಚಿತರು ಆಘಾತಕ್ಕೊಳಗಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ಕಾರ್ಟೂನ್ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಹಾಗೂ ಪರಿಣತಿ ಹೊಂದಿದ್ದ ಅವರು ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಸಂಖ್ಯಾಶಾಸ್ತ್ರದ ಮೂಲಕ ಜ್ಯೋತಿಷ್ಯ ಮಾರ್ಗದರ್ಶನ ನೀಡುತ್ತಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.
ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸ್ಥಳೀಯರು ಹಾಗೂ ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here