ಉಡುಪಿ: ಶಟಲ್ ಆಟ ಆಡುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.
ಕೋಟೆಬೀಡು ಸಮೀಪದ ನಿವಾಸಿ ಪ್ರಶಾಂತ್ ಭೋಜ ಕುಂದರ್ (39) ಮೃತಪಟ್ಟವರು.
ಅವರು ಸಂಜೆ ಸುಮಾರು 5 ಗಂಟೆಗೆ ಶಟಲ್ ಆಟ ಆಡುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ನೇಹಿತರು ಅವರನ್ನು ಉಡುಪಿಯ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪ್ರಶಾಂತ್ ಅವರು ಎರಡು ತಿಂಗಳ ಹಿಂದೆ ಉದ್ಯೋಗ ಅರಸಿ ದುಬೈಗೆ ತೆರಳಿದ್ದು, 10 ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದರು. ಕಳೆದ ನಾಲ್ಕು ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಮೃತರ ಪತ್ನಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಟಪಾಡಿ: ಶಟಲ್ ಆಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವು

