Monday, November 23, 2026

ಅಜೆಕಾರು: ಮರಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ; ಚಾಲಕ ಸ್ಥಳದಲ್ಲೇ ಸಾವು, ಐವರು ಮಹಿಳೆಯರಿಗೆ ಗಾಯ

Must read

ಉಡುಪಿ: ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಅಂಡಾರು ಕೊಂದಲ್ಕೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಚಾಲಕ ಸೀತಾರಾಮ ರೈ (60) ಮೃತಪಟ್ಟಿದ್ದು, ವಾಹನದಲ್ಲಿದ್ದ ಮಹಿಳಾ ಕಾರ್ಮಿಕರಾದ ವಸಂತಿ, ಲೀಲಾವತಿ, ಶಾಲಿನಿ, ಶೋಭಾ ಮತ್ತು ಪ್ರೇಮ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡ್ತಲದ ಹಪ್ಪನಡ್ಕದ ಸದಾನಂದ ಶೆಟ್ಟಿ ಅವರ ಅಡಿಕೆ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಂಡಾರಿನಿಂದ ಕಾಡುಹೊಳೆ ಮಾರ್ಗವಾಗಿ ಸಂಚರಿಸುತ್ತಿದ್ದಾಗ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ.
ಚಾಲನೆ ಮಾಡುತ್ತಿದ್ದ ಸೀತಾರಾಮ ರೈ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದರಿಂದ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

spot_img

More articles

LEAVE A REPLY

Please enter your comment!
Please enter your name here