ಉಡುಪಿ: ನೇಜಾರು ತಾಯಿ ಹಾಗೂ ಮಕ್ಕಳ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ (39)ಯ ನ್ಯಾಯಾಂಗ ಬಂಧನ ಅವಧಿ ಡಿ.30ರವರೆಗೆ ವಿಸ್ತರಣೆಗೊಂಡಿದೆ.
ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆಗೊಳಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.
ಡಿ.5ರಂದು ನ್ಯಾಯಾಲಯವು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿ.18ರವರೆಗೆ ವಿಸ್ತರಿಸಿತ್ತು. ಇಂದು ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶೆ ದೀಪಾ ಅವರ ಮುಂದೆ ಹಾಜರುಪಡಿಸಲಾಯಿತು.
ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ, ಡಿ.30ಕ್ಕೆ ಹಾಜರುಪಡಿಸುವಂತೆ ಆದೇಶ ನೀಡಿದರು.