Home ಅಪರಾಧ ಉಡುಪಿ: ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಮೃತ್ಯು

ಉಡುಪಿ: ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಮೃತ್ಯು

ಉಡುಪಿ: ಹೃದಯಾಘಾತ ಸಂಭವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಸಂತೆಕಟ್ಟೆ ಸಮೀಪದ ಕೆಮ್ಮಣ್ಣು ಎಂಬಲ್ಲಿ ನಡೆದಿದೆ.


ಕೆಮ್ಮಣ್ಣು ನಿವಾಸಿ ಅಫ್ಕಾರ್ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ. ಈತ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.

ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅಫ್ಕಾರ್, ಡಿಸೆಂಬರ್ 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದನು. ಡಿ. 18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದನು.

ಆದರೆ, ಊರಿಗೆ ಹಿಂದಿರುಗಿದ ಸಂದರ್ಭದಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಅಫ್ಕಾರ್ ಕೊನೆಯುಸಿರೆಳೆದಿದ್ದಾನೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version