Monday, November 25, 2024

ಆಯುರ್ವೇದ ವೈದ್ಯರಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಿ; ತುಳುನಾಡ ರಕ್ಷಣಾ ವೇದಿಕೆ ಒತ್ತಾಯ

Must read

ಉಡುಪಿ: ರಾಜ್ಯದ ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆಯ ವೈದ್ಯರ ಘಟಕದ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.


ಆಯುರ್ವೇದ ಪದ್ಧತಿ ಚಿಕಿತ್ಸೆಯು ನಮ್ಮ ಅತ್ಯಂತ ಪುರಾತನ ಆರೋಗ್ಯ ಸಂರಕ್ಷಣಾ ವ್ಯವಸ್ಥೆಯಾಗಿದ್ದು, ಇದು ಔಷಧ ಮತ್ತು ತತ್ವಶಾಸ್ತ್ರಗಳ ಸಂಮ್ಮಿಶ್ರಣ ವಾಗಿದೆ. ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ಮೂಲ ಪದ್ಧತಿಯೊಂದಿಗೆ ಅಗತ್ಯ ಅಲೋಪತಿ ಔಷಧಗಳನ್ನು ಬಳಸದಂತೆ ನಿರ್ಬಂಧಿಸುವ ರಾಜ್ಯ ಸರಕಾರದ ಕಾನೂನು ಇವರ ವೃತ್ತಿ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ರಾಜ್ಯದಲ್ಲಿ ಆಯುರ್ವೇದ ವೈದ್ಯರಿಗೆ ಕೆಪಿಎಂಇಎ ಕಾಯ್ದೆಯಡಿಯಲ್ಲಿ ಪರಿವೀಕ್ಷಣೆಯ ಹೆಸರಿನಲ್ಲಿ ಕಿರುಕುಳ ನೀಡಲಾಗುತಿದ್ದು, ಇದನ್ನು ತಕ್ಷಣ ನಿಲ್ಲಿಸಬೇಕಿದೆ. ಕಾನೂನಿನಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ರಾಜ್ಯದ ಆಯುರ್ವೇದ ವೈದ್ಯರಿಗೂ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು. ಇದಕ್ಕಾಗಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ ಅದನ್ನು ಜಾರಿಗೆ ತರಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ರಾಜ್ಯ ಸರಕಾರವನ್ನು ಒತ್ತಾಯಿಸಿದೆ. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿಯೊಂದನ್ನು ಸಲ್ಲಿಸಲಾಯಿತು.

spot_img

More articles

LEAVE A REPLY

Please enter your comment!
Please enter your name here