Home ಕರಾವಳಿ ಉಡುಪಿ: ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ: ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ: 2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಇಂದು ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಸಂಚಾಲಕರಾದ ಅಜಿತ್ ಜೋಗಿ ಅವರು, ರಾಜ್ಯ ಸರಕಾರ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದೆ ವಿದ್ಯಾರ್ಥಿಗಳ ಬಗ್ಗೆ ಅಸಡ್ಡೆ ತೋರಿದೆ ಎಂದು ವ್ಯಕ್ತಪಡಿಸಿದರು.


ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, 4 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದನ್ನು ರದ್ದುಗೊಳಿಸಿರುವ ಸರಕಾರ ಎಲ್ಲರಿಗೂ ಈ ಕೂಡಲೇ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ ಕೆ. ನಗರ ಖೆಲೋ ಭಾರತ್ ಪ್ರಮುಖರಾದ ಸ್ವಸ್ತಿಕ್ ನಗರ ಸಂಪರ್ಕ ಪ್ರಮುಖ್ ರವಿಚಂದ್ರ ಮತ್ತು ಪ್ರಮುಖರಾದ ಕಿಶೋರ್, ನವೀನ್, ಹರ್ಷೇಂದ್ರ, ವರುಣ್, ಪ್ರಷ್ಮಾ, ಮಂಗಳಗೌರಿ, ಕೃತಿ ಪಾಲ್ಗೊಂಡಿದ್ದರು

Exit mobile version