Home ರಾಜ್ಯ ಹಿಜಾಬ್ ನಿಷೇಧ ವಾಪಸ್ ಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಹಿಜಾಬ್ ನಿಷೇಧ ವಾಪಸ್ ಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಉಡುಪಿ: ಹಿಜಾಬ್ ನಿಷೇಧವನ್ನು ವಾಪಸ್ ಪಡೆಯುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕು ಕವಲಂದೆ, ಎಚ್.ಡಿ. ಕೋಟೆ ತಾಲ್ಲೂಕು ಅಂತರಸಂತೆ ಹಾಗೂ ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್ ಠಾಣಿಗಳ ಕಟ್ಟಡಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.


ಉಡುಪು ಅವರವರ ಇಷ್ಟ. ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ಹಾಗೂ ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Exit mobile version