ಕೋಲ್ಕತ್ತ: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅನುಷ್ಠಾನಗೊಳ್ಳುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.
ಕೋಲ್ಕತ್ತದಲ್ಲಿ ನಡೆದ ರಾಜ್ಯ ಬಿಜೆಪಿಯ ಸಾಮಾಜಿಕ ಮಾಧ್ಯಮ ಮತ್ತು ಐಟಿ ವಿಭಾಗದ ಆಂತರಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಎ ಜಾರಿಗೊಳಿಸುವುದು ತಮ್ಮ ಪಕ್ಷದ ಬದ್ಧತೆಯ ವಿಚಾರ ಎಂದಿದ್ದಾರೆ.
ಇದೇ ವೇಳೆ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ರಾಜ್ಯದ 35ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 42 ಲೋಕಸಭೆ ಕ್ಷೇತ್ರಗಳಿದ್ದು, ಬಿಜೆಪಿ 2019ರಲ್ಲಿ 18 ಸ್ಥಾನಗಳಲ್ಲಿ ಗೆದ್ದಿದೆ.