Friday, November 22, 2024

ಬಿಜೆಪಿ ಸರ್ಕಾರ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ಅವ್ಯವಹಾರ ನಡೆಸಿತ್ತು: ಯತ್ನಾಳ್

Must read

ವಿಜಯಪುರ: ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.


ಬಿಎಸ್ ವೈ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಕೋವಿಡ್ ವೇಳೆ ₹45 ಮೌಲ್ಯದ ಒಂದು ಮಾಸ್ಕ್‌ಗೆ ₹485 ಬಿಲ್ ಹಾಕಲಾಯಿತು. ಎಲ್ಲದಕ್ಕೂ ಮನಬಂದಂತೆ ದರ ನಿಗದಿಪಡಿಸಿ, ಬಡವರನ್ನು ಶೋಷಿಸಿದ್ದಾರೆ ಎಂದು ಹರಿಹಾಯ್ದರು.


ಬೆಂಗಳೂರಿನಲ್ಲಿ 10 ಸಾವಿರ ಬೆಡ್‌ಗಳನ್ನು ಬಾಡಿಗೆಗೆ ಪಡೆದು, ಒಂದು ಬೆಡ್‌ಗೆ ದಿನಕ್ಕೆ ₹20 ಸಾವಿರ ಬಾಡಿಗೆ ದರ ನಿಗದಿ ಮಾಡಲಾಯಿತು. ಬಾಡಿಗೆ ಹಣ ಕೊಡುವ ಬದಲು ಅದೇ ದರದಲ್ಲಿ ಎರಡು ಬೆಡ್ ಖರೀದಿಸಬಹುದಿತ್ತು ಎಂದರು.


ಕೋವಿಡ್ ತಗುಲಿದ್ದ ರೋಗಿಗಳಿಗೆ ₹8 ಲಕ್ಷದಿಂದ ₹10 ಲಕ್ಷದವರೆಗೆ ಬಿಲ್‌ ಮಾಡಲಾಯಿತು. ನಮ್ಮದೇ ಬಿಜೆಪಿ ಸರ್ಕಾರವಿದ್ದರೂ ಕಳ್ಳರು ಕಳ್ಳರೇ ತಾನೇ? ಇದನ್ನು ಯಡಿಯೂರಪ್ಪ ಅವರ ಬಗ್ಗೆ ವಿಧಾನಸೌಧದಲ್ಲಿಯೇ ಹೇಳಿದ್ದೇನೆ. ಈ ಕುರಿತಂತೆ ನನ್ನಲ್ಲಿ ಇನ್ನಷ್ಟು ವಿಷಯಗಳಿವೆ. ಸಮಯ ಬಂದಾಗ ಎಲ್ಲವನ್ನೂ ಬಯಲು ಮಾಡುತ್ತೇನೆ ಎಂದು ಗುಡುಗಿದ್ರು.

spot_img

More articles

LEAVE A REPLY

Please enter your comment!
Please enter your name here