Friday, October 18, 2024

ಯುವಜನತೆಯನ್ನು ದುಶ್ಚಟಗಳಿಂದ ಹೊರತರುವ ಜವಾಬ್ದಾರಿ ಸಮಾಜದ ಮೇಲಿದೆ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

Must read

ಉಡುಪಿ: ಯುವಜನತೆ ದುಶ್ಚಟಗಳಿಗೆ ಬೇಗ ಬಲಿಯಾಗುತ್ತಾರೆ. ಆದರೆ ಅದರಿಂದ ಹೊರಬರುವುದು ತುಂಬಾ ಕಷ್ಟ. ಅವರನ್ನು ದುಶ್ಚಟಗಳಿಂದ ಹೊರ ತರುವ ಜವಾಬ್ದಾರಿ ಸಮಾಜದ ಮೇಲೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.


ಕಮಲ್ ವಿ.ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬಯಿ, ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಇವರ ಆಶ್ರಯದಲ್ಲಿ 32ನೇ ಮದ್ಯವ್ಯಸನ ವಿಮುಕ್ತಿ ವಸತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಇವತ್ತು ಮಧ್ಯವರ್ಜನ ಶಿಬಿರಕ್ಕೆ ಬರುವ ಮೂಲಕ ಅವರು ಗಟ್ಟಿ ನಿರ್ಧಾರ ಮಾಡಿದ್ದಾರೆ. ಅದು ತುಂಬಾ ಮುಖ್ಯ. ಅವರೆಲ್ಲರಿಗೂ ಒಳ್ಳೆಯದಾಗಲಿ. ಬಾಳಿಗಾ ಆಸ್ಪತ್ರೆಯ ಈ ಸಾಮಾಜಿಕ ಕಾರ್ಯ ಅಭಿನಂದನೀಯ ಎಂದರು.


ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ.ಬಾಳಿಗಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಯೆನೆಪೋಯಾ ವಿವಿಯ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅನಿಲ್ ಕಾಕುಂಜೆ ಹಾಗೂ ಐಎಂಐ ಉಡುಪಿ-ಕರಾವಳಿಯ ಅಧ್ಯಕ್ಷೆ ಹಾಗೂ ಖ್ಯಾತ ಪ್ರಸೂತಿ ತಜ್ಞೆ ಡಾ.ರಾಜಲಕ್ಷ್ಮೀ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಆಸ್ಪತ್ರೆಯ ನಿರ್ದೇಶಕ ಹಾಗೂ ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಅಧ್ಯಕ್ಷತೆ ವಹಿಸಲಿದ್ದರು. ಡಾ.ವಿರೂಪಾಕ್ಷ ದೇವರಮನೆ,ಡಾ.ದೀಪಕ್ ಮಲ್ಯ,ಡಾ.ಮಾನಸ್ ,ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


ಶಿಬಿರವು ಜನವರಿ 1 ರಿಂದ 10ರತನಕ ನಡೆಯಲಿದೆ.
ಡಾ.ಎ.ವಿ.ಬಾಳಿಗಾ ಆಸ್ಪತ್ರೆ ಕಳೆದ 20 ವರ್ಷಗಳಿಂದ ಜಿಲ್ಲೆಯಾದ್ಯಂತ ಮದ್ಯವ್ಯಸನದಿಂದ ಆಗುವ ದುಷ್ಪರಿಣಾಮಗಳ ಕುರಿತು ಸಮುದಾಯದಲ್ಲಿ ಅರಿವು ಮೂಡಿಸುವ ಹಾಗೂ ಅದಕ್ಕೆ ಚಿಕಿತ್ಸೆ ನೀಡುವ ಕಾರ್ಯ ಮಾಡುತ್ತಾ ಬಂದಿದ್ದು ಇದುವರೆಗೆ 31 ಶಿಬಿರಗಳನ್ನು ಆಯೋಜಿಸಿದೆ.

spot_img

More articles

LEAVE A REPLY

Please enter your comment!
Please enter your name here