Saturday, November 23, 2024

ಉಡುಪಿ ಪರ್ಯಾಯೋತ್ಸವ; ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ವಹಿಸಿ- ಜಿಲ್ಲಾಧಿಕಾರಿ

Must read

ಉಡುಪಿ: ಜನವರಿ 8 ರಿಂದ 18ರ ವರೆಗೆ ಶ್ರೀ ಕೃಷ್ಣಮಠ ಪರ್ಯಾಯ ಮಹೋತ್ಸವ ಹಿನ್ನೆಲೆ ನಗರ ವ್ಯಾಪ್ತಿಯಲ್ಲಿ ಪ್ರವಾಸಿಗರು, ಭಕ್ತಾಧಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಯೋಜನೆ ರೂಪಿಸಿ, ಸಂಚಾರದಲ್ಲಿ ವ್ಯತ್ಯಯವಾಗದಂತೆ ಹಾಗೂ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ನಗರ ವ್ಯಾಪ್ತಿಯಲ್ಲಿ ಅಗತ್ಯ ಮೂಲಭೂತ ಸೌಕರ್ಯ ಗಳನ್ನು ಕಲ್ಪಿಸುವ ರಸ್ತೆ ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ಶೀಘ್ರ ದಲ್ಲಿಯೇ ಪೂರ್ಣ ಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಕುಡಿಯುವ ನೀರಿನ ವ್ಯವಸ್ಥೆ ಆರೋಗ್ಯ ಸೇವೆ ಸೇರಿದಂತೆ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.


ಪ್ರತಿದಿನ 50-60 ಸಾವಿರ ವರೆಗೆ ಭಕ್ತಾಧಿಗಳು ಭಾಗವಹಿಸುವ ನಿರೀಕ್ಷೆಯಲ್ಲಿದ್ದು, ನಗರದ ನೈರ್ಮಲ್ಯ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಶೌಚಾಲಯ ವ್ಯವಸ್ಥೆಯನ್ನು ನಗರಸಭಾ ವತಿಯಿಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡುವುದರೊಂದಿಗೆ ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.


ಪರ್ಯಾಯ ಮಹೋತ್ಸವ ಕಾರ್ಯಕ್ರಮವು ರಾತ್ರಿ ವೇಳೆ ಜರುಗಲಿರುವ ಹಿನ್ನೆಲೆ, ಭಕ್ತಾದಿಗಳು ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತೆ ದಾರಿ ದೀಪಗಳನ್ನು ಸುಸಜ್ಜಿತ ವಾಗಿರುವಂತೆ ಹಾಗೂ ತಾತ್ಕಾಲಿಕ ಶೌಚಾಲಯಗಳನ್ನು ಸೃಜನಿಸಿ, ಸಮರ್ಪಕ ನೀರಿನ ವ್ಯವಸ್ಥೆ ಹಾಗೂ ಅವುಗಳ ನಿರ್ವಹಣೆ ಆಗುವಂತೆ ನೋಡಿಕೊಳ್ಳಬೇಕು ಎಂದರು.


ಮಠದ ಪಾರ್ಕಿಂಗ್ ಆವರಣದಲ್ಲಿ ಕೌಂಟರ್ ಗಳನ್ನೂ ತೆರೆದು ಸಾರ್ವಜನಿಕರಿಗೆ ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ ಯನ್ನು ಒಳಗೊಂಡ ಬ್ರೌಚರ್ ಗಾಳನ್ನು ಲಭ್ಯವಿರುವ ವಂತೆ ಹಾಗೂ ಸಹಾಯವಾಣಿ ಗಳನ್ನೂ ತೆರೆಯಬೇಕು. ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವ ಕುರಿತು ಅರಿವು ಮೂಡಿಸುವ ಚಿತ್ರಗಳನ್ನು ಎಲ್.ಇ.ಡಿ ಪರದೆಯಲ್ಲಿ ಪ್ರದರ್ಶಿಸುವ ಜೊತೆಗೆ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪ್ಯಾಕೇಜ್ ಸರ್ವೀಸ್ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಬೇಕೆಂದು ಪ್ರವಾಸೋದ್ಯಮ ಹಾಗೂ ಕೆ.ಎಸ್.ಆರ್. ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಸರಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಪ್ರಚಾರ ಪಡಿಸಲು ಸ್ಥಭ ಚಿತ್ರಗಳನ್ನು ವಿವಿಧ ಇಲಾಖೆಗಳಿಂದ ಸಿದ್ಧಪಡಿಸಿ, ಪ್ರಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ ಪ್ರದರ್ಶಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.


ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ಪ್ರವಾಸಿಗರು, ಸಾರ್ವಜನಿಕರು ಹಾಗೂ ಭಕ್ತಾದಿಗಳ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಬೋರ್ಡ್ ಹೈ ಸ್ಕೂಲ್, ಚರ್ಚ್ ಶಾಲೆ, ಎಂ.ಜಿ.ಎA. ಕ್ರೀಡಾಂಗಣ, ಬೀಡಿನಗುಡ್ಡೆ ಮೈದಾನ, ಅ ಮ್ಮಣ್ಣಿ ಶೆಟ್ಟಿ ಗ್ರೌಂಡ್,ಪುರಭವನ ಮತ್ತು ಲಭ್ಯವಿರುವ ಇತರೆ ಸೂಕ್ತ ಸ್ಥಳಗಳಲ್ಲಿ ವ್ಯವಸ್ಥೆ ಮಾಡಬೇಕು ಎಂದರು.


ಸಭೆಯಲ್ಲಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಎ.ಎಸ್.ಪಿ. ಸಿದ್ಧಲಿಂಗಪ್ಪ, ಮಾಹೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಡಾ.ಹೆಚ್.ಎಸ್.ಬಲ್ಲಾಳ್, ಮಾಜಿ ಶಾಸಕ ರಘುಪತಿ ಭಟ್, ಪೌರಾಯುಕ್ತ ರಾಯಪ್ಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಪುತ್ತಿಗೆ ಮಠದ ನಾಗರಾಜ್ ಆಚಾರ್ಯ, ಮಹೆಯ ವಿವಿ ಯ ಕುಲಪತಿ. ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here