Friday, September 20, 2024

ಉಡುಪಿ: ಆಡಳಿತಾಧಿಕಾರಿಗಳ ದುರಾಡಳಿತ ವಿರೋಧಿಸಿ ಬಿಜೆಪಿಯಿಂದ ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ

Must read

ಉಡುಪಿ: ಉಡುಪಿ ನಗರಸಭೆಯ ಆಡಳಿತಾಧಿಕಾರಿಗಳ ದುರಾಡಳಿತ ಕಾರ್ಯವೈಖರಿಯನ್ನು ವಿರೋಧಿಸಿ ಉಡುಪಿ ನಗರ ಬಿಜೆಪಿ ನೇತೃತ್ವದಲ್ಲಿ ಇಂದು ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.


ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಪೌರಾಯುಕ್ತರ ವಿರುದ್ಧ ದಿಕ್ಕಾರ ಕೂಗಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಕಳೆದ ಏಳು ತಿಂಗಳುಗಳಿಂದ ನಗರಸಭೆಯಲ್ಲಿ ಭ್ರಷ್ಟಾಚಾರ, ಕಳಪೆ ಕಾಮಗಾರಿ, ದುರಾಡಳಿತ ಹೆಚ್ಚಾಗಿದ್ದು, ಇದರ ವಿರುದ್ಧ ಜನ ರೋಸಿ ಹೋಗಿದ್ದಾರೆ. ಚುನಾಯಿತ ಜನಪ್ರತಿನಿಧಿಗಳ ಆಡಳಿತ ಇಲ್ಲದೆ ವಿವಿಧ ಸೇವೆ ಸವಲತ್ತುಗಳನ್ನು ಪಡೆಯುವಲ್ಲಿ ಜನಸಾಮಾನ್ಯರು ಬವಣೆ ಪಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ತಿಂಗಳಿಗೊಮ್ಮೆ ನಗರಸಭಾ ಸದಸ್ಯರ ಸಭೆ ನಡೆಸಬೇಕು. ವಾರಕ್ಕೆ ಒಂದು ದಿನ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿ ಪರಿಹಾರ ಒದಗಿಸಲು ಕ್ರಮ ತೆಗೆದುಕೊಳ್ಳಬೇಕು. ಕಳಪೆ ಕಾಮಗಾರಿ ಬಹ್ಗೆ ಸೂಕ್ತ ತನಿಖೆ ನಡೆಸಬೇಕು. ಕುಡಿಯುವ ನೀರಿನ ಅವೈಜ್ಞಾನಿಕ ದರ ಹೆಚ್ಚಳವನ್ನು ಹಿಂಪಡೆಯಬೇಕು. ಅಕ್ರಮ ಕಟ್ಟಡಗಳಿಗೆ ನೀಡಿರುವ ಪರವಾನಿಗೆಯನ್ನು ತಕ್ಷಣ ರದ್ದುಪಡಿಸಬೇಕು ಎಂದು ಅವರು ಒತ್ತಾಯಿಸಿದರು.


ಬಳಿಕ ನಗರಸಭೆ ಅಧಿಕಾರಿಗಳ ಮೂಲಕ ನಗರಸಭೆ ಆಡಳಿತಾಧಿಕಾರಿಯಾಗಿ ರುವ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಯೋಗೀಶ್ ಸಾಲ್ಯಾನ್, ಬಾಲಕೃಷ್ಣ ಶೆಟ್ಟಿ, ಕೃಷ್ಣರಾವ್ ಕೊಡಂಚ ಮೊದಲಾದವರು ಉಪಸ್ಥಿತರಿದ್ದರು

spot_img

More articles

LEAVE A REPLY

Please enter your comment!
Please enter your name here