ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಜ.18ರಂದು ನಡೆಯಲಿರುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಹೋಟೆಲ್, ರೆಸಾರ್ಟ್, ಹೋಮ್ ಸ್ಟೇ ಹಾಗೂ ಪ್ರವಾಸಿ ಸ್ಥಳಗಳನ್ನು ದೀಪಾಲಂಕೃತಗೊಳಿಸುವುದರೊಂದಿಗೆ ಪರ್ಯಾಯೋತ್ಸವಕ್ಕೆ ಮೆರುಗನ್ನು ಒದಗಿಸಬೇಕೆಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕೊಠಡಿಗಳನ್ನು ಕಾಯ್ದಿರಿಸಿ, ಸ್ವಚ್ಛತೆ, ಸುರಕ್ಷತೆ ಕಾಪಾಡುವುದರೊಂದಿಗೆ ಜಿಲ್ಲೆಯ ಪ್ರಸಿದ್ಧ ಊಟ ಉಪಹಾರಗಳನ್ನು ಒದಗಿಸಿ, ಬರುವಂತ ಪ್ರವಾಸಿಗರನ್ನು ಸತ್ಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ