ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಹಿನ್ನೆಲೆಯಲ್ಲಿ ಐದನೇ ದಿನದ ಹೊರಕಾಣಿಕೆ ಸಮರ್ಪಣೆ ಶನಿವಾರ ಅದ್ಧೂರಿಯಾಗಿ ನಡೆಯಿತು.
ಕಾಪು ತಾಲೂಕು, ಪಡುಬಿದ್ರೆ ವಲಯ, ಹೆಜಮಾಡಿ ವಲಯ, ಬೆಳ್ಮಣ್ಣು ವಲಯ, ಶಿರ್ವ ವಲಯ, ಕಟಪಾಡಿ ವಲಯ, ಅಲೆವೂರು ವಲಯ, ಉದ್ಯಾವರ ವಲಯದ ಹೊರೆಕಾಣಿಕೆ ಸಮರ್ಪಣೆ ಮಾಡಲಾಯಿತು. ಜೋಡುಕಟ್ಟೆಯಿಂದ ಆರಂಭಗೊಂಡ ಮೆರವಣಿಗೆಯು ಕೋರ್ಟ್ ರಸ್ತೆ, ಹಳೆ ಡಯಾನ ಸರ್ಕಲ್, ಅಲಂಕಾರ್, ತ್ರಿವೇಣಿ ಸರ್ಕಲ್, ಸಂಸ್ಕೃತ ಕಾಲೇಜು, ಕನಕದಾಸ ರಸ್ತೆ ಮೂಲಕ ಸಾಗಿಬಂದು ರಥಬೀದಿ ಮೂಲಕ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ನಿರ್ಮಿಸಿರುವ ಉಗ್ರಾಣ ಕೇಂದ್ರಕ್ಕೆ ತಲುಪಿತು.
ತಟ್ಟಿರಾಯ, ನಾಸಿಕ್ ಬ್ಯಾಂಡ್, ವಾದ್ಯ, ಚಂಡೆ, ಸಿಡಿಮದ್ದು, ಮಹಿಳಾ ಭಜನಾ ತಂಡಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿತು.
ಮೆರವಣಿಗೆಯಲ್ಲಿ ಮಠದ ದಿವಾನ ನಾಗರಾಜ್ ಆಚಾರ್ಯ, ಹೊರಕಾಣಿಕೆ ಸಮಿತಿ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಗೀತಾಂಜಲಿ ಸುವರ್ಣ, ಕಾಪು ದಿವಾಕರ ಶೆಟ್ಟಿ, ಯೋಗೀಶ್ ಶೆಟ್ಟಿ, ಅಲೆವೂರು ಶ್ರೀಕಾಂತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.