ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ಅವರು ನೇಮಕಗೊಂಡಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಿಶೋರ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಕಿಶೋರ್ ಕುಮಾರ್ ಅವರು, 2013 ರಲ್ಲಿ ಅಂದಿನ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಪಕ್ಷೇತರರಾಗಿ ಸ್ಪರ್ಧೆ ಮಾಡಿದ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕುಂದಾಪುರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಿಜೆಪಿಯ ಉಡುಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್ ಅವರು ಅಧ್ಯಕ್ಷ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಕಿಶೋರ್ ಅವರನ್ನು ಆಯ್ಕೆಗೊಳಿಸುವ ಮೂಲಕ ಆಶ್ಚರ್ಯ ಮೂಡಿಸಿದೆ.