ಉಡುಪಿ: ಮಕರ ಸಂಕ್ರಾಂತಿ ಸಂಭ್ರಮದ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಮೂರು ತೇರುಗಳ ಉತ್ಸವ ನಡೆಯಿತು.
ಮೊದಲು ರಥಬೀದಿಯಲ್ಲಿ ಬ್ರಹ್ಮರಥದಲ್ಲಿ ಕೃಷ್ಣನ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಸಣ್ಣರಥದಲ್ಲಿ ಮುಖ್ಯಪ್ರಾಣ ದೇವರು, ಗರುಡ ರಥದಲ್ಲಿ ಅನಂತೇಶ್ವರ ಮತ್ತು ಚಂದ್ರ ಮೌಳೀಶ್ವರ ದೇವರ ಮೂರ್ತಿಗಳನ್ನಿಟ್ಟು ಮಠಾಧೀಶರ ಸಹಿತ ಭಕ್ತರು ತೇರನ್ನು ಎಳೆದರು. ರಥೋತ್ಸವದ ವಿಶೇಷ ಆಕರ್ಷಣೆಯಾಗಿ ಸುಡುಮದ್ದು ಪ್ರದರ್ಶನ ನಡೆದಿದ್ದು, ಭಕ್ತರು ರೋಮಾಂಚನಗೊಂಡರು.
ಪರ್ಯಾಯ ಮಹೋತ್ಸವ ಹಿನ್ನೆಲೆಯಲ್ಲಿ ರಥಬೀದಿ ,ಕೃಷ್ಣಮಠ ಸಹಿತ ಪುತ್ತಿಗೆ ಮಠ ಮತ್ತು ಅಷ್ಠಮಠಗಳು ಆಕರ್ಷಕ ವಿದ್ಯುದ್ದೀಪಗಳಿಂದ ಕಂಗೊಳಿಸುತ್ತದೆ.ಇಂದಿನ ಉತ್ಸವದಲ್ಲಿ ಸಾವಿರಾರು ಜನ ಭಾಗಿಯಾದರು.