ಉಡುಪಿ: ಜನವರಿ 22 ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ದೇವಸ್ಥಾನಗಳು ಸ್ವಚ್ಛವಾಗಬೇಕೆಂದು ಪ್ರಧಾನಿ ಮೋದಿ ಕರೆ ನೀಡಿದ್ದರು.
ಅದರಂತೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಉಡುಪಿಯ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಮುಖಂಡರು ಸಚಿವೆಗೆ ಸಾಥ್ ನೀಡಿದರು.
ಬಳಿಕ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಉಡುಪಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನ ಮಾಡಿದ್ದೇವೆ. ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ಮಾಡಿದ್ದು ಬಹಳ ಖುಷಿ ತಂದಿದೆ ಎಂದರು.