Friday, September 20, 2024

ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಕರಿಮಣಿ ಸರ ಕಳವು ಪ್ರಕರಣ; ಇಬ್ಬರು ಮಹಿಳೆಯರ ಬಂಧನ

Must read

ಉಡುಪಿ: ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಕರಿಮಣಿ ಸರ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳಾ ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿ, ಅವರಿಂದ ಕಳವಾದ 3.50 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಹುಬ್ಬಳ್ಳಿಯ ಬೀಬಿಜಾನ್ ಶೇಖ್ (58) ಮತ್ತು ಪಾರವ್ವ (54) ಎಂದು ಗುರುತಿಸಲಾಗಿದೆ. ಮಹಿಳೆಯೊಬ್ಬರು ಮದುವೆ ನಿಮಿತ್ತ ಖರೀದಿಸಿ ತಂದ ಕರಿಮಣಿ ಸರವನ್ನು ಬ್ಯಾಗಿನಲ್ಲಿಟ್ಟು ಡಿ.27ರಂದು ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದ ಪೂಜೆಗೆ ಹೋಗಿದ್ದರು. ಈ ವೇಳೆ ಕಳ್ಳರು ಚಿನ್ನಾಣಭರಣವಿದ್ದ ಪರ್ಸ್ ಕಳವುಗೈದಿದ್ದರು.

ಈ ಬಗ್ಗೆ ಜ.14ರಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ಮತ್ತು ಇತರ ತಾಂತ್ರಿಕ ದಾಖಲೆ ವಿಶ್ಲೇಷಿಸಿ, ಪ್ರಕರಣ ದಾಖಲಾದ ಮೂರೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವುಗೈದ 3.5 ಲಕ್ಷ ಮೌಲ್ಯದ 51.900 ಗ್ರಾಂ ತೂಕದ ಚಿನ್ನದ ಕರಿಮಣಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

spot_img

More articles

LEAVE A REPLY

Please enter your comment!
Please enter your name here