Friday, September 20, 2024

ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ರಜೆ ಇಲ್ಲ: ಸಿಎಂ ಸಿದ್ದರಾಮಯ್ಯ

Must read

ತುಮಕೂರು: ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ನಾಳೆ (ಜ.22) ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.

ವಿಶೇಷ ಪೂಜೆ:
ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯಾಗುತ್ತಿದ್ದು ಮುಜರಾಯಿ ಇಲಾಖೆ ವತಿಯಿಂದ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ದೇವಸ್ಥಾನವನ್ನು ನಾಳೆ ಉದ್ಘಾಟಿಸುತ್ತಿರುವುದಾಗಿ ತಿಳಿಸಿದರು.

ನಿಷೇಧ ಇಲ್ಲ:
ತಮಿಳುನಾಡಿನಲ್ಲಿ ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ನೆರಪ್ರಸಾರವನ್ನು ನಿಷೇಧ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡಿನ ಬಗ್ಗೆ ನಾನು ಯಾಕೆ ಮಾತನಾಡಲಿ. ಇಲ್ಲಿ ಹಾಗೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

spot_img

More articles

LEAVE A REPLY

Please enter your comment!
Please enter your name here