ದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ ಬೆನ್ನಲ್ಲೇ
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕಾಂಗ್ರೆಸ್ ಮತ್ತೊಂದು ಶಾಕ್ ನೀಡಿದ್ದಾರೆ.
ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳಲ್ಲಿ ಒಂದಾಗಿರುವ ಆಮ್ ಆದ್ಮ ಪಕ್ಷ (ಎಎಪಿ)ವು ಪಂಜಾಬ್ ನಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ತಿಳಿಸಿದ್ದಾರೆ.
ದೆಹಲಿ, ಪಂಜಾಬ್, ಹರಿಯಾಣ, ಗೋವಾ ಮತ್ತು ಗುಜರಾತ್‌ನಲ್ಲಿ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಎಎಪಿ ಮತ್ತು ಕಾಂಗ್ರೆಸ್ ಮಾತುಕತೆ ನಡೆಸುತ್ತಿರುವಾಗಲೇ ಪಂಜಾಬ್ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.
ಏತನ್ಮಧ್ಯೆ ಚಂಡೀಗಢ ಮೇಯರ್ ಚುನಾವಣೆಗಾಗಿ ಎಎಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿವೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾನ್, ‘ಒಂದು ಲೋಕಸಭಾ ಕ್ಷೇತ್ರಕ್ಕೆ ಎಎಪಿಯಿಂದಲೇ ಮೂರರಿಂದ ನಾಲ್ಕು ಸಂಭಾವ್ಯ ಅಭ್ಯರ್ಥಿಗಳಿದ್ದಾರೆ. ಸಮೀಕ್ಷೆಗಳನ್ನು ನಡೆಸುವ ಮುಖಾಂತರ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ನಾವು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದರು.