Tuesday, September 17, 2024

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

Must read

ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಬಿಹಾರದಲ್ಲಿ ಜೆಡಿಯು- ಆರ್ ಜೆಡಿ ಮೈತ್ರಿ ಸರಕಾರ ಪತನಗೊಂಡಿದೆ.

ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿದ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಪಾಟ್ನಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದೆ.

ಬಿಹಾರದಲ್ಲಿ ಆರ್ ಜೆಡಿ – ಜೆಡಿಯು ಸರ್ಕಾರ ಪತನವಾಗಿದ್ದು, ನೂತನ ಜೆಡಿಯು- ಬಿಜೆಪಿ ಸರ್ಕಾರ ರಚನೆಯಾಗಲಿದೆ. ಈ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ರವಿವಾರ ಸಂಜೆಯೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಪಣತೊಟ್ಟಂತಿದ್ದ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಜತೆ ಮುಂಚೂಣಿಯಲ್ಲಿ ನಿಂತು ಇಂಡಿಯಾ ಮೈತ್ರಿಕೂಟ ರಚನೆಗೆ ಕಾರಣರಾಗಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತ್ತೆ ಬಿಜೆಪಿ ಜತೆಗೆ ನಿತೀಶ್ ಕುಮಾರ್ ಸೇರಿದ್ದಾರೆ.

spot_img

More articles

LEAVE A REPLY

Please enter your comment!
Please enter your name here