ಅಲಪ್ಪುಝ: ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲ 15 ಮಂದಿ ಆರೋಪಿಗಳಿಗೆ ಒಂದನೇ ಮಾವೆಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಡಿಸೆಂಬರ್ 19, 2021ರಂದು ಬಿಜೆಪಿ ನಾಯಕ ಹಾಗೂ ವಕೀಲ ರಂಜೀತ್ ಶ್ರೀನಿವಾಸ್ ಅವರನ್ನು ಹತ್ಯೆಗೈದಿದ್ದ ಪ್ರಕರಣದಲ್ಲಿ ನೈಸಮ್, ಅಜ್ಮಲ್, ಅನೂಪ್, ಮುಹಮ್ಮದ್ ಅಸ್ಲಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಮ್, ಸಫ್ರುದ್ಧೀನ್, ಮನ್ಷದ್, ಜಸೀಬ್ ರಾಜಾ, ನವಾಸ್, ಸಮೀರ್, ನಝೀರ್, ಝಾಕಿರ್ ಹುಸೈನ್, ಶಾಜಿ ಪೂವತ್ತುಂಗಲ್ ಹಾಗೂ ಶ್ರೇನಸ್ ಅಶ್ರಫ್ ಸೇರಿದಂತೆ ಎಲ್ಲ ಆರೋಪಿಗಳನ್ನೂ ದೋಷಿಗಳೆಂದು ನ್ಯಾಯಾಲಯವು ಘೋಷಿಸಿದೆ. ಈ ಎಲ್ಲರೂ ಸದ್ಯ ನಿಷೇಧಕ್ಕೊಳಗಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಹಾಗೂ ಅದರ ರಾಜಕೀಯ ಘಟಕ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ)ಗೆ ಸೇರಿದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ಕೇರಳ ಇತಿಹಾಸದಲ್ಲೇ ಇಷ್ಟು ಮಂದಿ ಆರೋಪಿಗಳಿಗೆ ಯಾವುದೇ ನ್ಯಾಯಾಲಯವು ಮರಣ ದಂಡನೆ ವಿಧಿಸಿರಲಿಲ್ಲ ಎಂದು onmanorama.com ವರದಿ ಮಾಡಿದೆ.
ಪ್ರಕರಣ ಹಿನ್ನೆಲೆ:
ಡಿಸೆಂಬರ್ 19, 2021ರಂದು ಬಿಜೆಪಿಯ ಇತರೆ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಜನೀತ್ ರ ವೆಲ್ಲಕಿನಾರ್ ನಿವಾಸಕ್ಕೆ ನುಗ್ಗಿದ್ದ ಆರೋಪಿಗಳು ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.