Thursday, November 21, 2024

ಕೇಂದ್ರ ಬಜೆಟ್ ನಲ್ಲಿ 300 ಯೂನಿಟ್ ಉಚಿತ ಸೋಲಾರ್ ವಿದ್ಯುತ್ ಘೋಷಣೆ

Must read

ನವದೆಹಲಿ: 2024-25ನೇ ಸಾಲಿನ ಮಧ್ಯಂತರ ಬಜೆಟ್‌ ನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮನೆಯ ಮೇಲ್ಛಾವಣಿ ಮೇಲಿನ ಸೌರಶಕ್ತಿ ಫಲಕದಿಂದ 1 ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ಸಿಗಲಿದೆ ಎಂದು ಘೋಷಣೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಈಗಾಗಲೇ 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರಶಕ್ತಿ ಅಳವಡಿಸುವ ಗುರಿಯೊಂದಿಗೆ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ ಘೋಷಣೆ ಮಾಡಿದ್ದಾರೆ. ಅಲ್ಲದೇ ಈ ಯೋಜನೆಗೆ ಚಾಲನೆ ನೀಡುವ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳನ್ನು ಗುರಿಯಾಗಿಸಿಕೊಂಡು ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ ಘೋಷಣೆ ಮಾಡಲಾಗಿದೆ. ವಿದ್ಯುತ್ ಬಿಲ್‌ಗಳನ್ನು ಕಡಿಮೆ ಮಾಡಲು ಮತ್ತು ಅವರ ವಿದ್ಯುತ್ ಅಗತ್ಯಗಳಿಗಾಗಿ ಸೌರಶಕ್ತಿ ಅವಲಂಬಿಸುವ ಮೂಲಕ ನಿಜವಾದ ಆತ್ಮನಿರ್ಭರ್ ಆಗಲು ಪ್ರತಿ ಮನೆಯವರು ಸೂರ್ಯನ ಶಕ್ತಿಯನ್ನು ಬಳಸಿಕೊಳ್ಳಬಹುದು ಎಂದು ಪ್ರಧಾನಿ ತಿಳಿಸಿದ್ದರು.

ಈ ಯೋಜನೆಯಡಿ 1 ಕೋಟಿ ಮನೆಯ ಮೇಲ್ಛಾವಣಿ ಮೇಲೆ ಸೌರಶಕ್ತಿ ಫಲಕ ಆಳವಡಿಕೆ ಮಾಡಲಾಗುತ್ತದೆ. ಇದರಿಂದಾಗಿ ಮನೆಗಳು ಸೌರಶಕ್ತಿ ವಿದ್ಯುತ್ ಪಡೆಯುವ ಜೊತೆಗೆ ಹೆಚ್ಚಿನ ವಿದ್ಯುತ್‌ ಅನ್ನು ಮಾರಾಟ ಮಾಡಲು ಸಹ ಅವಕಾಶ ಕಲ್ಪಿಸಲಾಗುತ್ತದೆ.
ಯೋಜನೆ ಜಾರಿಗೊಳಿಸಲು ರಾಷ್ಟ್ರ ಮಟ್ಟದ ಅಭಿಯಾನವನ್ನು ಆರಂಭಿಸುವಂತೆ ಪ್ರಧಾನಿ ಮೋದಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

spot_img

More articles

LEAVE A REPLY

Please enter your comment!
Please enter your name here