Thursday, November 21, 2024

ಅಡ್ವಾಣಿ ಅವರಿಗೆ ‘ಭಾರತ ರತ್ನ’ ಅತ್ಯಂತ ಸಂತೋಷದ ವಿಚಾರ: ಪೇಜಾವರ ಶ್ರೀ

Must read

ಉಡುಪಿ: ದೇಶದ ಮೌಲ್ಯಾಧಾರಿತ ರಾಜಕಾರಣದ ಪ್ರತಿನಿಧಿಯಾಗಿ ದಶಕಗಳ ಕಾಲ ಅಮೂಲ್ಯ ಸೇವೆ ಸಲ್ಲಿಸಿದ ಮತ್ತು ಅಯೋಧ್ಯೆ ರಾಮಮಂದಿರ ಆಂದೋಲನದಲ್ಲಿ ಅತ್ಯಂತ ಶ್ರದ್ಧಾ ಪೂರ್ವಕ ನೇತೃತ್ವ ನೀಡಿದ ಶ್ರೀ ಲಾಲ್ ಕೃಷ್ಣ ಅಡ್ವಾಣಿಯವರಿಗೆ ದೇಶದ ಪರಮೋಚ್ಚ ಪ್ರಶಸ್ತಿ ಭಾರತ ರತ್ನ ಘೋಷಣೆಯಾಗುವ ಮೂಲಕ ರಾಮಲಲ್ಲಾನ‌ ಪೂರ್ಣ ಕೃಪೆಯಾಗಿದೆ ಎಂದು ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತದ ವಾರ್ತಾ ಮಂತ್ರಿ , ಗೃಹಮಂತ್ರಿ ಉಪಪ್ರಧಾನಿಯೇ ಮೊದಲಾಗಿ ಹಲವು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ ಅಡ್ವಾಣಿಯವರು , ಒಂದೊಮ್ಮೆ ತಮ್ಮ ಮೇಲೆ ಹವಾಲಾ ಹಗರಣದ ಆರೋಪ ಬಂದಾಗ ಆರೋಪ ಮುಕ್ತನಾಗುವವರೆಗೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಘೋಷಿಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಉಲ್ಲೇಖನೀಯ . ಇದು ದೇಶದ ಎಲ್ಲ ಸ್ತರದ ರಾಜಕಾರಣಿಗಳಿಗೂ ಮಾದರಿಯಾಗಿದೆ.

ಜನ್ಮಭೂಮಿ ಆಂದೋಲನದಲ್ಲಿ ನಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥರು , ವಿಶ್ವ ಹಿಂದು ಪರಿಷತ್ತಿನ ನೇತಾರರಾಗಿದ್ದ ಅಶೋಕ್ ಸಿಂಘಲ್ ಮುರಳಿ ಮನೋಹರ ಜೋಶಿ ಮೊದಲಾದವರೊಂದಿಗೆ ಮುಂಚೂಣಿಯಲ್ಲಿದ್ದ ಅವರು ಈ ಉದ್ದೇಶಕ್ಕಾಗಿ ದೇಶಾದ್ಯಂತ ರಾಮರಥಯಾತ್ರೆ ಮಾಡಿ ಜನರಲ್ಲಿ ಸುಪ್ತವಾಗಿದ್ದ ರಾಮಭಕ್ತಿಯನ್ನು ಜಾಗೃತಗೊಳಿಸಿದ್ದು ಚರಿತ್ರಾರ್ಹ . ನ್ಯಾಯಾಲಯದಿಂದ ಜನ್ಮಭೂಮಿ ಪರ ತೀರ್ಪು ಬಂದ ಹೊತ್ತಲ್ಲಿ ಅವರನ್ನು ಅವರ ಮನೆಯಲ್ಲೇ ಭೇಟಿ ಮಾಡಿ ಅಭಿನಂದಿಸಿದ ಹೊತ್ತಲ್ಲಿ ಇಳಿವಯಸ್ಸಲ್ಲೂ ಅವರು ತೋರಿದ್ದ ಸೌಜನ್ಯ , ಶ್ರದ್ಧೆಯನ್ನು ಮರೆಯಲು ಸಾಧ್ಯವಿಲ್ಲ ಎಂದ ಶ್ರೀಗಳು ಅಡ್ವಾಣಿಯವರನ್ನು ವಿಶೇಷವಾಗಿ ಅಭಿನಂದಿಸಿದ್ದಾರೆ .

spot_img

More articles

LEAVE A REPLY

Please enter your comment!
Please enter your name here