Friday, September 20, 2024

ರಸ್ತೆ ಬದಿಯಲ್ಲಿ ಬಸ್ಸಿಗೆ ಕಾಯುತ್ತಿದ್ದವರಿಗೆ ಲಾರಿ ಢಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು

Must read

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಜಿರೆ ಸಮೀಪ ಇಂದು ಮಧ್ಯಾಹ್ನ ನಡೆದಿದೆ.

ಮೃತ ಪುರುಷ ಹಾಗೂ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಅತಿಯಾದ ವೇಗದಲ್ಲಿ ಬಂದ ಲಾರಿ ಬಸ್ಸು ಕಾಯುತ್ತಿದ್ದವರ ಮೇಲೆ ನುಗ್ಗಿದ್ದು, ಇದರಿಂದ ಗಂಭೀರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಲಾರಿ ಸಮೀಪದ ವಿದ್ಯುತ್ ಕಂಬಗಳಿಗೂ ಢಿಕ್ಕಿ ಹಿಡೆದಿದ್ದು, ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here