Sunday, November 24, 2024

48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಹೆಚ್ಚುವರಿ 10 ಯುನಿಟ್: ಸಚಿವ ಕೆ.ಜೆ. ಜಾರ್ಜ್

Must read

ಉಡುಪಿ: 48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಶೇ.10ರ ಬದಲು 10 ಯುನಿಟ್ ಕೊಡಲು ತೀರ್ಮಾನ ಮಾಡಲಾಗಿದೆ. ಇದರಿಂದ 58ಯುನಿಟ್‌ವರೆಗೆ ಹಣ ಪಾವತಿಸ ಬೇಕಾಗಿಲ್ಲ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಉಡುಪಿ ಮುಸ್ಲಿಂ ವೆಲ್‌ಫೇರ್ ಅಸೋಸಿಯೇಶನ್ ವತಿಯಿಂದ ಮಣಿಪಾಲ ಕೆಎಂಸಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಉಡುಪಿ ಜಾಮಿಯಾ ಮಸೀದಿ ಆವರಣದಲ್ಲಿ ಏರ್ಪಡಿಸಲಾದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗೃಹಜ್ಯೋತಿ ಯೋಜನೆಯಲ್ಲಿ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಯಾವುದೇ ಲಾಭ ಸಿಗುತ್ತಿಲ್ಲ. 15-20 ಯುನಿಟ್ ವಿದ್ಯುತ್ ಬಳಕೆದಾರರಿಗೆ ಶೇ.10 ಅಂದರೆ 1.5ಯುನಿಟ್ ಹೆಚ್ಚುವರಿ ಮಾತ್ರ ಸಿಗುತ್ತದೆ. ಅದಕ್ಕಾಗಿ ಶೇ.10ರ ಬದಲು 10 ಯುನಿಟ್ ಕೊಡಲು ನಿರ್ಧರಿಸಲಾಗಿದೆ ಎಂದರು.

ರಕ್ತವನ್ನು ಪ್ರಾಯೋಗಾಲಯದಲ್ಲಿ ಸೃಷ್ಠಿ ಮಾಡಲು ಸಾಧ್ಯವಿಲ್ಲ. ಅದನ್ನು ಮನುಷ್ಯ ದಾನ ಮಾಡುವುದರಿಂದ ಮಾತ್ರ ಪಡೆಯಲು ಸಾಧ್ಯ. ಆದುದರಿಂದ ರಕ್ತದಾನ ಮೂಲಕ ಇನ್ನೊಬ್ಬರ ಪ್ರಾಣ ಉಳಿಸುವ ಕಾರ್ಯ ಮಾಡಬಹುದು ಎಂದು ಅವರು ಅಭಿಪ್ರಾಯಪಟ್ಟರು
ಉಡುಪಿ ಜಿಲ್ಲಾ ಸರ್ಜನ್ ಡಾ.ವೀಣಾ ಕುಮಾರಿ ಎಂ. ಮಾತನಾಡಿದರು. ಅಧ್ಯಕ್ಷತೆಯನ್ನು ಮುಸ್ಲಿಂ ವೆಲ್‌ಫೇರ್ ಅಸೋಸಿ ಯೇಶನ್ ಅಧ್ಯಕ್ಷ ಮುನೀರ್ ಅಹಮದ್ ವಹಿಸಿದ್ದರು. ಮಣಿಪಾಲದ ಬ್ಲಡ್ ಬ್ಯಾಂಕ್ ಹಿರಿಯ ನಿವಾಸಿ ಡಾ.ದೀಪ್, ಮಣಿಪಾಲ ಮಸೀದಿ ಅಧ್ಯಕ್ಷ ಹಾಜಿ ಅಬ್ದುಲ್ಲಾ ಪರ್ಕಳ, ಉಡುಪಿ ಜಾಮಿಯಾ ಮಸೀದಿ ಅಧ್ಯಕ್ಷ ರಿಯಾಝ್ ಅಹ್ಮದ್, ಸಾಮಾಜಿಕ ಕಾರ್ಯಕರ್ತ ಮುನೀರ್ ಕಲ್ಮಾಡಿ ಮುಖ್ಯ ಅತಿಥಿಗಳಾಗಿದ್ದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮುಖಂಡರಾದ ಎಂ.ಎ.ಗಫೂರ್, ಹಬೀಬ್ ಅಲಿ ಮೊದಲಾದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ವಿ.ಎಸ್. ಉಮರ್ ಸ್ವಾಗತಿಸಿದರು. ಎಂ.ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

spot_img

More articles

LEAVE A REPLY

Please enter your comment!
Please enter your name here