Sunday, November 24, 2024

ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ದೈವ ನರ್ತಕ ಸಾಧು ಪಾಣರ ಇನ್ನಿಲ್ಲ

Must read

ಉಡುಪಿ:

ಉಡುಪಿ ಜಿಲ್ಲೆಯ ಪ್ರಸಿದ್ಧ ದೈವ ನರ್ತಕ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಜಾನಪದ ಕಲಾವಿದ ಸಾಧು ಪಾಣಾರ ಮಂಚಿಕೆರೆ ಅವರು (68) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.

ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಇಂದು ಮಧ್ಯಾಹ್ನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು 45 ವರ್ಷಗಳಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದು, ಈ ಕಲೆಯು ವಂಶಪಾರಂಪರ್ಯವಾಗಿ ಅವರಿಗೆ ಸಿದ್ಧಿಸಿದೆ. ನರ್ತನ, ನುಡಿಗಟ್ಟು, ಪಾಡ್ದನ ಕಲೆಗಳನ್ನು ಸೊಗಸಾಗಿ ನೆರವೇರಿಸಿಕೊಂಡು ಬಂದಿದ್ದಾರೆ.

ಉಡುಪಿ ಜಿಲ್ಲೆ ಹಾಗೂ ಹೊರ ಊರುಗಳಲ್ಲಿ ಅವರು ದೈವಾರಾಧನೆ ನಡೆಸಿದ್ದಾರೆ. ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ, ಬಗ್ಗು ಪಂಜುರ್ಲಿ, ಬೊಬ್ಬರ್ಯ, ಮಲೆಧೂಮಾವತಿ ದೈವಗಳ ಸೇವೆ ಸಲ್ಲಿಸಿದ್ದಾರೆ.

ಅವರ ಕಲಾ ಸೇವೆಯನ್ನು ಗುರುತಿಸಿ ಈಗಾಗಲೇ ಹಲವು ಸಂಘ-ಸಂಸ್ಥೆಗಳು ಗೌರವಿಸಿವೆ. ಮೃತರು ಪತ್ನಿ ವಸಂತಿ ಪಾಣಾರ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ. ಪುತ್ರ ದಿನೇಶ್‌ ಪಾಣಾರ ತಂದೆಯ ವೃತ್ತಿಯನ್ನೇ ನಡೆಸುತ್ತಿದ್ದಾರೆ.

spot_img

More articles

LEAVE A REPLY

Please enter your comment!
Please enter your name here