ಹೊಸದಿಲ್ಲಿ: ವಿವಾದಿತ ಚಂಡೀಗಢ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮತಪತ್ರಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್, ರಿಟರ್ನಿಂಗ್ ಆಫೀಸರ್ ಆಗಿದ್ದ ಅನಿಲ್ ಮಸೀಹ್ ಅವರು ಅಸಿಂಧು ಎಂದು ಘೋಷಿಸಿದ್ದ ಎಂಟು ಮತಪತ್ರಗಳನ್ನು ಸಿಂಧು ಎಂದು ಘೋಷಿಸಿದೆ ಹಾಗೂ ಮತಪತ್ರಗಳ ಮರುಎಣಿಕೆಗೆ ಆದೇಶಿಸಿತ್ತು.
ಮತಪತ್ರಗಳ ಮರುಎಣಿಕೆಯ ಬಳಿಕ ಆಮ್ ಆದ್ಮಿ ಪಕ್ಷದ ಕುಲದೀಪ್ ಕುಮಾರ್ ಅವರನ್ನು ಚಂಡೀಗಢ ಮೇಯರ್ ಚುನಾವಣೆಯಲ್ಲಿ ವಿಜೇತರೆಂದು ಸುಪ್ರೀಂ ಕೋರ್ಟ್ ಘೋಷಣೆ ಮಾಡಿದೆ.
ಮತಪತ್ರಗಳನ್ನು ತಿರುಚಿ ಬಿಜೆಪಿ ಅಭ್ಯರ್ಥಿಯನ್ನು ಈ ಹಿಂದೆ ಮೇಯರ್ ಎಂದು ಘೋಷಿಸಿದ್ದ ರಿಟರ್ನಿಂಗ್ ಅಧಿಕಾರಿ ಅನಿಲ್ ಮಸೀಹ್ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಪೀಠ