Friday, November 22, 2024

ಸೌಜನ್ಯ ಅತ್ಯಾಚಾರ- ಕೊಲೆ ಪ್ರಕರಣ: ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್‌

Must read

ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಈ ಕುರಿತಂತೆ ಮೃತಳ ಸೌಜನ್ಯಳ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿ, ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ಇತ್ತೀಚೆಗೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ಮಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ಅಲ್ಲದೆ, ಪ್ರಕರಣದಿಂದ ಸಂತೋಷ್ ರಾವ್ ಅನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರು ಪರ ವಕೀಲರು ಮನವಿ ಮಾಡಿದರು.

ಅದನ್ನು ಪರಿಗಣಿಸಿರುವ ನ್ಯಾಯಪೀಠ, ರೋಸ್ಟರ್‌ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟಿಗೆ ನ್ಯಾಯಪೀಠ ಸೂಚಿಸಿದೆ.

spot_img

More articles

LEAVE A REPLY

Please enter your comment!
Please enter your name here