Sunday, September 22, 2024

ರಾಜ್ಯಸಭಾ ಚುನಾವಣೆಯ ಫಲಿತಾಂಶ: ಕಾಂಗ್ರೆಸ್ 3, ಬಿಜೆಪಿಗೆ 1 ಸ್ಥಾನ

Must read

ಬೆಂಗಳೂರು : ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ ಕಾಂಗ್ರೆಸ್‌ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಆ ಮೂಲಕ ಮೈತ್ರಿ ಕೂಟಕ್ಕೆ ಭಾರೀ ಮುಖಭಂಗ ಉಂಟಾಗಿದೆ.
ಕಾಂಗ್ರೆಸ್​ನ ಅಜಯ್ ಮಾಕನ್ -47, ನಾಸೀರ್ ಹುಸೈನ್ – 47, ಜಿ.ಸಿ. ಚಂದ್ರಶೇಖರ್ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ ಎಂದು ತಿಳಿದು ಬಂದಿದೆ

spot_img

More articles

LEAVE A REPLY

Please enter your comment!
Please enter your name here