Saturday, September 21, 2024

ನಟ, ರಾಜಕಾರಣಿ, ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ಇನ್ನಿಲ್ಲ

Must read

ಬೆಂಗಳೂರು: ನಟ, ರಾಜಕಾರಣಿ ಹಾಗೂ ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ಇಂದು ನಿಧನ ಹೊಂದಿದರು.
ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.
1993 ದಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕ್ಕೆ ಸಿನಿಮಾ ಮೂಲಕ ಶಿವರಾಮ್ ಬಣ್ಣದ ಲೋಕಕ್ಕೆ ಪ್ರವೇಶಿಸಿದ್ದರು. ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ಟೈಗರ್ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

2013 ರಲ್ಲಿ ಐಎಎಸ್ ನಿಂದ ಸ್ವಯಂ ನಿವೃತ್ತಿ ಪಡೆದ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು

spot_img

More articles

LEAVE A REPLY

Please enter your comment!
Please enter your name here