ಉಡುಪಿ: ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಅವರು, ಈಗಾಗಲೇ ಬಿಜೆಪಿ ಪಕ್ಷದ ನಾಯಕರಾದ ಯಡಿಯೂರಪ್ಪ, ಸಂತೋಷ್ ಜಿ, ವಿಜಯೇಂದ್ರ, ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ಮಾತುಕತೆ ನಡೆದಿತ್ತು. ಎಲ್ಲರಿಂದಲೂ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ. ಅದರೆ ಇಲ್ಲಿನ ತನಕ ಯಾವ ನಿರ್ಧಾರವನ್ನು ಅವರು ಕೈಗೊಂಡಿಲ್ಲ. ಹಾಗಾಗಿ ಪುತ್ತಿಲ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದರು.
ಮಂಡಲ ಅಧ್ಯಕ್ಷ ನೀಡಬೇಕೆಂದು ಬೇಡಿಕೆ ಇಟ್ಟಿದ್ದೆವು. ಆದರೆ ಅದು ಕೂಡ ಸಫಲವಾಗಿಲ್ಲ. ಹೀಗಾಗಿ ಕಾರ್ಯಕರ್ತರ ಒತ್ತಾಸೆಯಂತೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.