Tuesday, September 17, 2024

ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ; ಯುವಕ‌ ಮೃತ್ಯು

Must read

ಉಡುಪಿ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಇಂದು ಮುಂಜಾನೆ ನಡೆದಿದೆ.

ಮೃತ ಸವಾರನನ್ನು 21 ವರ್ಷದ ಸ್ವಸ್ತಿಕ್ ಎಂದು ಗುರುತಿಸಲಾಗಿದೆ. ಇವರು ಇಂದು ಮುಂಜಾನೆ ತನ್ನ ಬೈಕ್ ನಲ್ಲಿ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ವಸ್ತಿಕ್ ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ

spot_img

More articles

LEAVE A REPLY

Please enter your comment!
Please enter your name here