Tuesday, September 17, 2024

ಉಡುಪಿ: ಇಂದು ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ; ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೈ ಅಭ್ಯರ್ಥಿ?

Must read

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು (ಮಾರ್ಚ್ 12) ಸಂಜೆ 4ಕ್ಕೆ ಬೆಂಗಳೂರಿನ ಸ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಇವರೇ ಘೋಷಣೆ ಆಗುವ ಎಲ್ಲ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವ ಹೆಗ್ಡೆಯವರೇ ಖಚಿತಪಡಿಸಿದ್ದಾರೆ. ಬ್ರಹ್ಮಾವರ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಅವರು ಅನಂತರ ಕಾಂಗ್ರೆಸ್ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ನಿಂದ ಗೆದ್ದು ಸಂಸದರಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಅನಂತರದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರಿದ್ದರು. ಬಿಜೆಪಿ ಸರಕಾರ ಇದ್ದಾಗ ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿತ್ತು.

ಹೆಗ್ಡೆ ಬೇಡಿಕೆಗೆ ಸ್ಪಂದಿಸದ ಸಿಎಂ:.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಒಂದು ವೇಳೆ ಸೋತಾರೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸೂಕ್ತ ಸ್ಥಾನ ಮಾನ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇವರ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತವಾಗಿ ಸ್ಪಂದಿಸಲಿಲ್ಲ. ಆದ್ದರಿಂದ ಆಕಾಂಕ್ಷಿಯ ರೇಸ್‌ನಲ್ಲಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರಿಗೂ ಟಿಕೆಟ್ ಒಲಿಯುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

spot_img

More articles

LEAVE A REPLY

Please enter your comment!
Please enter your name here