ನವದೆಹಲಿ: ದೇಶದ 2024ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತ, ಏಪ್ರಿಲ್ 26ರಂದು ಎರಡನೇ ಹಂತ, ಮೇ 7ರಂದು ಮೂರನೇ ಹಂತ, ಮೇ 13ರಂದು ನಾಲ್ಕನೇ ಹಂತ, ಮೇ 20ರಂದು ಐದನೇ ಹಂತ, ಮೇ 25ರಂದು ಆರನೇ ಹಂತ ಹಾಗೂ ಜೂನ್ 1ರಂದು ಏಳನೇ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26ರಂದು ಮೊದಲ ಹಂತ ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ.
ಚುನಾವಣೆ ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ ಎಂದು ತಿಳಿಸಿದರು.