ಉಡುಪಿ: ಕರ್ನಾಟಕದ 28 ಲೋಕಸಭೆ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26ರಂದು ಮೊದಲ ಹಂತ ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ.
ಮೊದಲ ಹಂತದಲ್ಲಿ ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು-ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ ಶಿವಮೊಗ್ಗ, ಹಾವೇರಿ, ಬಳ್ಳಾರಿ, ಕೊಪ್ಪಳ, ಬೀದರ್, ಬಾಗಲಕೋಟೆ, ಚಿಕ್ಕೋಡಿ, ಉತ್ತರ ಕನ್ನಡ, ರಾಯಚೂರು, ಕಲಬುರಗಿ, ವಿಜಾಪುರ, ದಾವಣಗೆರೆ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.