Home ಕರಾವಳಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಜಯಪ್ರಕಾಶ್ ಹೆಗ್ಡೆ

ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಜಯಪ್ರಕಾಶ್ ಹೆಗ್ಡೆ

ಕುಂದಾಪುರ: ಕುಂದಾಪುರ ರಾಜಕೀಯದಲ್ಲಿ ಬದ್ಧ ವೈರಿಗಳೆಂದೇ ಕರೆಯಲ್ಪಡುತ್ತಿದ್ದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.

ಜಯಪ್ರಕಾಶ್ ಹೆಗ್ಡೆ ಅವರು ಹಾಲಾಡಿ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದ್ದು, ಇದು ಬಹಳಷ್ಟು ಸಂಚಲನ ಸೃಷ್ಟಿಸಿದೆ. ಈ ವೇಳೆ ಹೆಬ್ರಿ ಕ್ಷೇತ್ರದ ಕಾಂಗ್ರೆಸ್ ನಾಯಕರಾದ ಎಚ್. ಪ್ರವೀಣ್ ಬಲ್ಲಾಳ್ ಉಪಸ್ಥಿತರಿದ್ದರು.

Exit mobile version