Saturday, July 27, 2024

ಲೋಕಸಭೆ ಚುನಾವಣೆ: ಬಿಜೆಪಿಯ 5 ಪಟ್ಟಿ ಬಿಡುಗಡೆ

Must read

ಹೊಸದಿಲ್ಲಿ: ಕರ್ನಾಟಕದಲ್ಲಿ ಬಾಕಿ ಉಳಿಸಿಕೊಂಡಿರುವ ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ 5ನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಬದಲು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.

ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರಕ್ಕೆ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಟಿಕೆಟ್ ನೀಡಲಾಗಿದೆ. ರಾಯಚೂರು ಎಸ್ ಟಿ ಮೀಸಲು ಕ್ಷೇತ್ರದಲ್ಲಿ ರಾಜ ಅಮರೇಶ್ವರ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಪ್ರತಿನಿಧಿಸುತ್ತಿರುವ ಚಿತ್ರದುರ್ಗ ಎಸ್ ಸಿ ಮೀಸಲು ಕ್ಷೇತ್ರಕ್ಕೆ ಅಭ್ಯರ್ಥಿ ಇನ್ನಷ್ಟೇ ಘೋಷಿಸಬೇಕಿದೆ. ಬಿಜೆಪಿ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರವನ್ನು ಮಿತ್ರ ಪಕ್ಷ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.

spot_img

More articles

LEAVE A REPLY

Please enter your comment!
Please enter your name here