Friday, September 20, 2024

ಮಣಿಪಾಲ: ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳ ತಂಡದಿಂದ ಮಾರಣಾಂತಿಕ ಹಲ್ಲೆ

Must read

ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

ಸುಮಾರು‌ ಐದಾರು ಮಂದಿಯಿದ್ದ ತಂಡವೊಂದು ವಿದ್ಯಾರ್ಥಿಯೋರ್ವನನ್ನು ಅಟ್ಟಾಡಿಸಿ ಕೊಂಡು ಬಂದು ,ಅಪಾರ್ಟ್ ಮೆಂಟ್ ಗೆ ನುಗ್ಗಿ ಯದ್ವಾತದ್ವಾ‌ ಹಲ್ಲೆ‌ಗೈದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಣಿಪಾಲದ ಸರಳಬೆಟ್ಟುವಿನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಮಣಿಪಾಲದ ಎಂಐಟಿ ಯ ಬಿ.ಟೆಕ್ ವಿದ್ಯಾರ್ಥಿ ಅಭಿಷೇಕ್ (23) ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

spot_img

More articles

LEAVE A REPLY

Please enter your comment!
Please enter your name here