Friday, September 20, 2024

ಕಾಂಗ್ರೆಸ್ ಮುಖಂಡ ಶಿವರಾಜ್ ತಂಗಡಗಿ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಮುಟ್ಲುಪಾಡಿ ಸವಾಲು

Must read

ಉಡುಪಿ: ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯಿಂದ ಕಾಂಗ್ರೆಸ್ ಸಂಪೂರ್ಣವಾಗಿ ಕಂಗೆಟ್ಟಿದೆ. ಸಚಿವ ತಂಗಡಗಿ ಅವರು ‘ಮೋದಿ ಬೆಂಬಲಿಸುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ’ ಎಂದಿರುವುದು ಖಂಡನೀಯ. ಕಪಾಳಕ್ಕೆ ಹೊಡೆಯುವುದು ದೂರದ ಮಾತು. ಶಿವರಾಜ್ ತಂಗಡಗಿಗೆ ತಾಕತ್ತಿದ್ದರೆ ಮೋದಿ ಅಭಿಮಾನಿಗಳನ್ನು ಮುಟ್ಟಿ ನೋಡಲಿ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಸವಾಲು ಹಾಕಿದ್ದಾರೆ.

ಉಡುಪಿ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸೋಲಿನ ವಾಸನೆ ಬರುತ್ತಿದ್ದಂತೆ ಕಾಂಗ್ರೆಸ್‌, ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದೆ. ದೇಶದಲ್ಲಿ ಪಾತಾಳಕ್ಕೆ ಕುಸಿದಿರುವ ಕಾಂಗ್ರೆಸ್‌, ರಾಜ್ಯದಲ್ಲೂ ಪಾತಾಳಕ್ಕಿಳಿಯುವ ಭೀತಿಯಿಂದ ಈ ರೀತಿಯ ಹೊಲಸು ಹೇಳಿಕೆಗಳನ್ನು ನೀಡುತ್ತಿದೆ ಎಂದು ಕಿಡಿಕಾರಿದರು.

ಸಂಸ್ಕೃತಿಯ ಗಂಧ ಗಾಳಿಯ ಅರಿವಿಲ್ಲದ ಶಿವರಾಜ್ ತಂಗಡಿಗಿಗೆ ಕಾoಗ್ರೆಸ್ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೊಣೆ ನೀಡಿರುವುದು ನಾಚಿಕೆಗೇಡು. ತಂಗಡಗಿ ಹೇಳಿಕೆಯಿಂದ ಕಾಂಗ್ರೆಸ್ ತನ್ನ ಗೂoಡಾಗಿರಿ ಸಂಸ್ಕೃತಿಯ ಪರಮಾವಧಿಯನ್ನು ದಾಟಿರುವುದು ಸಾಬೀತಾಗಿದೆ. ಕಾಂಗ್ರೆಸ್ಸಿನ ಈ ಎಲ್ಲಾ ಎಡಬಿಡಂಗಿತನದ ಹೀನ ವರ್ತನೆಗೆ ರಾಜ್ಯದ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here