Tuesday, September 17, 2024

ಕಟಪಾಡಿ: ಬಸ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

Must read

ಉಡುಪಿ: ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ರಾತ್ರಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಪಾದಚಾರಿಯ ಗುರುತು ಪತ್ತೆಯಾಗಿಲ್ಲ.

ಪಾದಚಾರಿಗೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ಕಳೆದುಕೊಂಡ ಬಸ್ ಡಿವೈಡರ್ ಮೇಲೆ ಏರಿ ನಿಂತಿದೆ. ಘಟನೆಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here