Friday, September 13, 2024

ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

Must read

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ   ಸೌಂದರ್ಯ ಜಗದೀಶ್  ಅವರು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್‌ನಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ.

ಬೆಳಿಗ್ಗೆ 10 ಗಂಟೆಗೆ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಕುಟುಂಬಸ್ಥರು ಸುಗಣ ಆಸ್ಪತ್ರೆಗೆ ದಾಖಲು ಮಾಡಲು ಮುಂದಾದರು. ಆದರೆ ಆಸ್ಪತ್ರೆಗೆ ತರುವಷ್ಟರಲ್ಲೇ ಸೌಂದರ್ಯ ಜಗದೀಶ್ ಸಾವನ್ನಪ್ಪಿದ್ದರು. 

ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿ, ಬಿಲ್ಡರ್‌ ಕೂಡ ಆಗಿರುವ ಸೌಂದರ್ಯ ಜಗದೀಶ್ ಅವರು,  ಸುದೀಪ್ ನಟನೆಯ ಮಸ್ತ್ ಮಜಾ ಮಾಡಿ, ಅಪ್ಪು ಮತ್ತು ಪಪ್ಪು,  ರಾಮ್‌ಲೀಲಾ, ಸ್ನೇಹಿತರು ಮುಂತಾದ ಜನಪ್ರಿಯ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಹಲವು ಸಿನಿಮಾ ಗಳನ್ನ ವಿತರಣೆ ಕೂಡ ಮಾಡಿದ್ದಾರೆ. ಇತ್ತೀಚೆಗೆ ಅವರ ಮಗಳ ಮದುವೆಯನ್ನು ನೆರವೇರಿಸಿದ್ದರು.

ಇತ್ತೀಚೆಗೆ ಇವರ ಒಡೆತನದ ಜೆಟ್ಲಾಗ್​ ನಲ್ಲಿ ತಡರಾತ್ರಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿ ಪ್ರಕರಣ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಈ ವಿವಾದದ ಬಳಿಕ ಜೆಟ್ಲಾಗ್ ರಸ್ಟೋ ಬಾರ್‌ ಲೈಸನ್ಸ್ 25 ದಿನಗಳ ರದ್ದು ಮಾಡಲಾಗಿತ್ತು. ಪತ್ನಿ ರೇಖಾ ಜಗದೀಶ್ ಈ ಬಾರ್‌ನ ಸಂಸ್ಥಾಪಕರು ಮತ್ತು ಡೈರೆಕ್ಟರ್ ಆಗಿದ್ದಾರೆ. ಅವರ ಮೇಲೂ ಪ್ರಕರಣ ದಾಖಲಾಗಿತ್ತು.
ಮೃತ ಸೌಂದರ್ಯ ಜಗದೀಶ್ ಅವರು ಪತ್ನಿ ರೇಖಾ ಜಗದೀಶ್, ಮಗ ನಟ ಸ್ನೇಹಿತ್, ಓರ್ವ ಪುತ್ರಿ ಸೇರಿ ಅಪಾರ ಬಂಧು ಬಳಗದವರನ್ನು, ಚಿತ್ರರಂಗದ ಸ್ನೇಹಿತರನ್ನು ಅಗಲಿದ್ದಾರೆ.

spot_img

More articles

LEAVE A REPLY

Please enter your comment!
Please enter your name here