ಉಡುಪಿ: ಶಿಕಾರಿಪುರ ನ್ಯಾಯಾಲಯ ಸಂಘದ ಆವರಣದಲ್ಲಿ ಬುಧವಾರ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರ ಪರವಾಗಿ ಮತಯಾಚಿಸಿ, ಇಬ್ಬರೂ ಅಭ್ಯರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸುವಂತೆ ಎಲ್ಲ ವಕೀಲರುಗಳಲ್ಲಿ ಮನವಿ ಮಾಡಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ನ್ಯಾಯಾಲಯ ಸಂಘದ ಪದಾಧಿಕಾರಿಗಳು, ವಕೀಲರು, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು