Thursday, November 21, 2024

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ಬಿ. ನಾಗೇಂದ್ರ ರಾಜೀನಾಮೆ ಸಿಎಂ ಸೂಚನೆ

Must read

ಬೆಂಗಳೂರು: ರಾಜ್ಯ ಕಾಂಗ್ರೆಸ್​ ಸರ್ಕಾರದ ಮೊದಲ ವಿಕೆಟ್​ ಪತನವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ.

ಹಗರಣ ಸಂಬಂಧ ಗುರುವಾರ (ಮೇ 30) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿದ್ದರು. ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತೀರ್ಮಾನ ಕೈಗೊಂಡರು. ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ, ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.

ಬಿ. ನಾಗೇಂದ್ರ ಅವರು ರಾಜಿನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆ ಸರ್ಕಾರದ ಮೇಲೆ ಒತ್ತಡ ಸೃಷ್ಠಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.

ಏನಿದು ಪ್ರಕರಣ?:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.
ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here