Sunday, September 8, 2024

ಕಾಪು: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿಯ ಬಂಧನ

Must read

ಉಡುಪಿ: ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬವರನ್ನು ಬಂಧಿಸಿದ್ದಾರೆ.

ಉಡುಪಿಯಿಂದ ಕಾಪು‌ ಕಡೆಗೆ ಬರುತ್ತಿದ್ದ ಕಾಪು‌ ಸಿಐ ಜಯಶ್ರೀ ಮಾನೆ ಅವರು ಉದ್ಯಾವರ ಸೇತುವೆ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಸ್ಕಾರ್ಪಿಯೋ ಕಾರೊಂದು ನಿಂತಿರುವುದನ್ನು ಗಮನಿಸಿದ್ದರು. ಕೂಡಲೇ ಸ್ಕಾರ್ಪಿಯೋ ಬಳಿಗೆ ಬಂದು ನಿಲ್ಲಿಸಲು ಯತ್ನಿಸಿದಾಗ ಆರೋಪಿಗಳು ಕಾರನ್ನು ಪ್ರಾಣಕ್ಕೆ ಮಾರಕವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಕಾಪು ಕಡೆಗೆ ತೆರಳಿದ್ದರು.

ಅವರು ತತ್ ಕ್ಷಣ ಈ ಬಗ್ಗೆ ಕಾಪು ಮತ್ತು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದು ಕಾಪು ಎಸ್ಸೈ ಅಬ್ದುಲ್ ಖಾದರ್ ನೇತೃತ್ವದ ತಂಡ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದೆ.

ಈ ಸಂದರ್ಭ ತುರ್ತು ಕಾರ್ಯಾಚರಣೆ ನಡೆಸಿದ ಕಾಪು‌ ಸಿಐ ಜಯಶ್ರೀ ಮಾನೆ ಮತ್ತು ಕಾಪು ಎಸ್ ಐ ಅಬ್ದುಲ್ ಖಾದರ್ ಹಾಗೂ ಸಿಬ್ಬಂದಿಗಳು ಸ್ಕಾರ್ಪಿಯೋದಲ್ಲಿ ಇದ್ದವರನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸಿದಾಗ ದರೋಡೆಗೆ ಹೊಂಚು ಹಾಕುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು.

ಸ್ಕಾರ್ಪಿಯೋ ಕಾರ್ ನಲ್ಲಿ ಡ್ರ್ಯಾಗನ್, ಚೂರಿ, ಕಬ್ಬಿಣದ ಪೈಪ್ ಮತ್ತು ಮರಳು ಮಿಶ್ರಿತ ಮೆಣಸಿನ ಪುಡಿಯನ್ನು ಪತ್ತೆ ಹಚ್ಚಿದ್ದು, ಪೊಲೀಸರು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ

spot_img

More articles

LEAVE A REPLY

Please enter your comment!
Please enter your name here