ಉಡುಪಿ: ಲೋಕಸಭಾ ಫಲಿತಾಂಶ ಬೆನಲ್ಲೇ ಉಡುಪಿ ಕಾಂಗ್ರೆಸ್ ನಲ್ಲಿ ಗೋ ಬ್ಯಾಕ್ ಅಭಿಯಾನ ಶುರುವಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಉಡುಪಿಯ ಕೈ ಕಾರ್ಯಕರ್ತರು ʼಗೋ ಬ್ಯಾಕ್ʼ ಅಭಿಯಾನ ನಡೆಸುತ್ತಿದ್ದಾರೆ. ಸಮಸ್ಯೆ ಆದಾಗ ನೀವು ಬರೋದೆ ಇಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಾರ್ಯಕರ್ತರು ಕಿಡಿಕಾರಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸುವಂತೆ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯವೈಖರಿ ವಿರುದ್ಧ ಅಸಮಾಧಾನ ಹೊರಹಾಕಿರುವ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಪೋಸ್ಟರ್ ವೈರಲ್ ಮಾಡುತ್ತಿದ್ದಾರೆ.