ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸಚಿವ ಮಂಡಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮನವಿ ಮಾಡಿದರು.